ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಒಂಟಿ ಮಹಿಳೆಯೋರ್ವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟುವಿನಲ್ಲಿರುವ ಪಂಡಿತ್ ಹೌಸ್ ನ ವಿಜಯಾ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

ವಿಜಯಾ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ಶಂಕಿಸಲಾಗಿದೆ. ಒಂಟಿ ಮಹಿಳೆ ವಾಸವಾಗಿದ್ದ ಬಾಡಿಗೆ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಹಿಳೆಯು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Also Read  ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

error: Content is protected !!
Scroll to Top