ಉಡುಪಿ: ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸಿ ಭಿಕ್ಷೆ ಬೇಡುತ್ತಿದ್ದ ಯುವಕನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, . 17. ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಯುವಕನೋರ್ವನನ್ನು ಸಮಾಜ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ಪಾಡಿ ಹಾಗೂ ತಾರನಾಥ್ ಎಂಬವರು ರಕ್ಷಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಈ ಯುವಕನು ಚಿತ್ರದುರ್ಗ ಮೂಲದವರಾಗಿದ್ದು, ಪದವಿ ವಿದ್ಯಾಭ್ಯಾಸದ ಬಳಿಕ ಯಾವುದೇ ಉದ್ಯೋಗ ಸಿಗದೇ ಇದ್ದ ಕಾರಣ ಸಿನಿಮಾಗಳನ್ನು ನೋಡಿ ಅದರಿಂದ ಪ್ರೇರಿತಗೊಂಡು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಬಾವಿಸಿ, ಮನೆಯನ್ನು ಬಿಟ್ಟು ಬೇರೆ ಬೇರೆ ಪ್ರದೇಶಗಳಲ್ಲಿ ಅಲೆದಾಡಿ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿದ್ದ ಎಂದು ಹೇಳಲಾಗಿದೆ. ಭಿಕ್ಷೆಯಿಂದ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಎಂದು ಅರ್ಥಮಾಡಿಸಿ, ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ಪಾಡಿ ಹಾಗೂ ತಾರನಾಥ್ ಎಂಬವರು ಆತನನ್ನು ಆಸ್ಪತ್ರೆಗೆ ದಾಖಲಿಸಿ, ನಂತರ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

Also Read  ಅಪ್ರಾಪ್ತೆ ಪ್ರೇಯಸಿಯ ಮೇಲೆ ಮಚ್ಚು ಬೀಸಿದ ಯುವಕ.! ➤ತಾನೂ ಆತ್ಮಹತ್ಯೆಗೆ ಶರಣು

error: Content is protected !!
Scroll to Top