ಬೈಕ್ ಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ. 17. ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಎಚ್‌.ಡಿ.ಕೋಟೆ ತಾಲ್ಲೂಕಿನ ಹ್ಯಾಂಡ್‌ ಪೋಸ್ಟ್‌ ಬಳಿ ನಡೆದಿದೆ.

Xl

ಮೃತರನ್ನು ಆನಗಟ್ಟಿ ಗ್ರಾಮದ ಗೋಪಾಲ್(25) ಎಂದು ಗುರುತಿಸಲಾಗಿದೆ. ಎಚ್.ಡಿ.ಕೋಟೆಯ ಹರೀಶ್ (25) ಎಂಬವರುಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸರಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top