(ನ್ಯೂಸ್ ಕಡಬ) newskadaba.com ಕಾಪು, ನ. 18: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕಾಪುವಿನ ಇನ್ನಂಜೆ ಬಳಿ ನಡೆದಿದೆ.
ಮೃತ ದುರ್ದೈವಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಇಮ್ರಾನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.