ಕಳಾರ ಅಂಗನವಾಡಿ ► ಮಾತೃಪೂರ್ಣ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ಕಳಾರ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮಗೇರ ತುಂಬೆತ್ತಡ್ಕ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಗ್ರಾ.ಪಂ. ಸದಸ್ಯರಾದ ಹಾಜಿ ಕೆ.ಎಂ. ಹನೀಫ್, ಅಶ್ರಫ್ ಶೇಡಿಗುಂಡಿ, ಜಯಂತಿ ಕಳಾರ ಸ.ಹಿ.ಪ್ರಾ.ಶಾಲೆಯ ಮುಖ್ಯಗುರು ಹಮೀದ್, ಗ್ರಾ.ಪಂ. ಕಾರ್ಯದರ್ಶಿ ಭುವನೇಂದ್ರ ಮರ್ದಾಳ, ಅಂಗನವಾಡಿ ಕಾರ್ಯಕರ್ತೆ ಸುಶೀಲ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Scroll to Top