(ನ್ಯೂಸ್ ಕಡಬ) newskadaba.com ಬೆಂಗಳೂರು ನ. 18: ಕರ್ನಾಟಕಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಆಗಬೇಕಿಲ್ಲ. ಕೋವಿಡ್ ನೆಗೆಟಿವ್ ವರದಿ ನೀಡಿದರೆ ಕ್ವಾರಂಟೈನ್‌ನಿಂದ ವಿನಾಯಿತಿ ಸಿಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 7ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.
2ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸಿದರೆ ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ಸಿಗಲಿದೆ. ಏರ್ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂ ದೃಢೀಕರಣದೊಂದಿಗೆ ಪ್ರಮಾಣ ಪತ್ರ ಅಪ್ ಲೋಡ್ ಮಾಡಬೇಕು. ಒಂದು ವೇಳೆ ಪ್ರಯಾಣಿಕರು ಆರ್‌ಟಿಪಿಸಿಆರ್ ಕೋವಿಡ್ ವರದಿ ಹೊಂದಿಲ್ಲವಾದರೆ ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
ರಾಜ್ಯ ಸರ್ಕಾರ ನಿಗದಿ ಮಾಡಿದ ದರದಂತೆ ಪ್ರಯಾಣಿಕರು ಹಣವನ್ನು ಪಾವತಿ ಮಾಡಬೇಕು. ಎಲ್ಲಾ ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಯಾವುದೇ ಪ್ರಯಾಣಿಕರಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಲಾಗುತ್ತದೆ. ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳದ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಎಂಬ ಬದಲಾವಣೆಯನ್ನು ಮಾಡಲಾಗಿದೆ.