(ನ್ಯೂಸ್ ಕಡಬ) newskadaba.com ಕೋಲಾರ, ನ. 18. ಹಳೆಯ ಮನೆಯೊಂದರಲ್ಲಿ 13 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಗಳನ್ನು ಹಂಗಳ ಗ್ರಾಮದ ಹರೀಶ್, ರಘು, ಸುಹೇಲ್ ಮತ್ತು ಜಗದೀಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆಯಲ್ಲಿ ಬಾಲಕಿಯು ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ಈ ನಾಲ್ವರು ಬಾಲಕಿಯನ್ನು ಅಪಹರಿಸಿ, ಹಳೆಯ ಮನೆಯೊಂದರಲ್ಲಿ ಕೂಡಿ ಹಾಕಿ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
Also Read ವಾರುಸುಧಾರನ ಜನನ ► 83ನೇ ವಯಸ್ಸಿನಲ್ಲಿ ಗಂಡು ಮಗುವಿನ ತಂದೆಯಾದ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ..!!!