ಕಲ್ಲುಗುಡ್ಡೆ ಅಂಗನವಾಡಿ ಗಾಂಧಿಜಯಂತಿ ► ಪುಟಾಣಿಗಳ ಕೈತೊಳೆಯುವ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿಜಯಂತಿ, ವಿಶ್ವಕೈತೊಳೆಯುವ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಚರಿಸಲಾಯಿತು.

ಅಂಗನವಾಡಿಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅಂಗನವಾಡಿ ಪುಟಾಣಿಗಳಿಗೆ ಕೈತೊಳೆಯಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮಹಾತ್ಮ ಗಾಂಧಿಜಿಯವರ ತತ್ವಾದರ್ಶಗಳನ್ನು ಜೀವನದಲ್ಲಿ ಪುಟಾಣಿಗಳಿಂದಲೇ ಅನುಸರಿಸುತ್ತಾ ಬರುವುದಲ್ಲದೆ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆಯುವುದರ ಮೂಲಕ ಉತ್ತಮ ಸಮಾಜ ನಿರ್ಮಿಸುವಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳೋಣ ಎಂದು ಶುಭಹಾರೈಸಿದರು.

ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ, ತಾ.ಪಂ.ಸದಸ್ಯ ಗಣೇಶ್ ಕೈಕುರೆ  ಪುಟಾಣಿಗಳಿಗೆ ಹಾರೈಸಿದರು. ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ, ಮಾಜಿ ಅಧ್ಯಕ್ಷ ಅಂಜೇರಿಜೋಸ್, ನೂಜಿಬಾಳ್ತಿಲ ಪಿಡಿಒ ಆನಂದ, ಸದಸ್ಯ ಕೆ.ಜೆ ತೋಮಸ್, ರಜಿತಾ ಪದ್ಮನಾಭ, ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್, ಕಡಬ ಪ.ಪೂ.ಕಾಲೇಜಿನ ಪ್ರಾಚಾರ್ಯ ಚೆರಿಯನ್ ಇ.ಸಿ, ಶಾಲಾ ಕಾಲೇಜಿನ ಶಿಕ್ಷಕರು, ಕಡಬ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಶಿಬಿರಾರ್ಥಿಗಳು, ಬೆಥನಿ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ತ್ರೀಶಕ್ತಿ ಮಹಿಳೆಯರು ಉಪಸ್ಥಿತರಿದ್ದರು. ಕಲ್ಲುಗುಡ್ಡೆ ಅಂಗನವಾಡಿ ಕಾರ್ಯಕರ್ತೆ ಅಮೀನ ಕೆ ಸ್ವಾಗತಿಸಿ, ವಂದಿಸಿದರು. ಪಾರ್ವತಿ ಸಹಕರಿಸಿದರು.

error: Content is protected !!
Scroll to Top