ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು . 19: ಉಳ್ಳಾಲ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲಿದೆ.

 

 

ನವೆಂಬರ್ 1ರಂದು ಕಿನ್ಯದ ಕೇಶವ ಶಿಶು ಮಂದಿರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಉಳ್ಳಾಲವನ್ನು ಪಾಕಿಸ್ತಾನವೆಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಪ್ರಭಾಕರ್ ಭಟ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ ದೂರು ದಾಖಲಿಸಿತ್ತು. ಆದರೆ ಪೊಲೀಸರು ಪ್ರಕರಣವನ್ನು ದಾಖಲಿಸಿರಲಿಲ್ಲ. ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದ್ದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಪೊಲೀಸರ ನಿರ್ಲಕ್ಷ್ಯವನ್ನು ಖಂಡಿಸಿ ನ.19ರಂದು ಸಂಜೆ 4.00 ಗಂಟೆಗೆ ಪಕ್ಷದ ವತಿಯಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಉಳ್ಳಾಲ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಬ್ಬಾಸ್ ಕಿನ್ಯ ತಿಳಿಸಿದ್ದಾರೆ.

Also Read  ಮುಸ್ಲಿಮ್ ಸಮುದಾಯದ ಕೇರಳಜಂಯಿಯ್ಯತುಲ್ ಉಲಮಾ 93ವರ್ಷದ ಸ್ಥಾಪನಾದಿನಾಚರಣೆ

 

 

error: Content is protected !!
Scroll to Top