ಕೌಟುಂಬಿಕ ಕಲಹದಲ್ಲಿ ಪತ್ನಿ ಕೊಂದ ಪತಿಯ ಬಂಧನ

(ನ್ಯೂಸ್ ಕಡಬ) newskadaba.com ತುಮಕೂರು . 19: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಅಮಾನುಷವಾಗೆ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಇಂದು ಮುಂಜಾನೆ ನಡೆದಿದೆ. ಚಾಂದುಪಾಷ ಎಂಬ ವ್ಯಕ್ತಿ ತನ್ನ ಪತ್ನಿ ಜಬೀನ (40)ಳನ್ನು ಕೊಲೆಗೈದಿದ್ದಾರೆ. ಜಬೀನ ಮತ್ತು ಮಗ ಮಹಮ್ಮದ್ ಅಲಿ(12) ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಚಾಂದ್ ಪಾಷ ದೊಣ್ಣೆಯಿಂದ ಇಬ್ಬರ ತಲೆಗೆ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.

Xl

 

ದೊಣ್ಣೆಯಿಂದ ಹೊಡೆದ ರಭಸಕ್ಕೆ ಪತ್ನಿ ಜಬೀನ ಸ್ಥಳದಲ್ಲಿಯೇ ಮೃತಪಟ್ಟರೆ, ಆಕೆಯ ಪುತ್ರ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ‌. ಮೃತ ಮಹಿಳೆಯ ಶವವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆರೋಪಿ ಚಾಂದುಪಾಷನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹದಿಂದ ಕೊಲೆ ಮಾಡಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

Also Read  ಕುಂದಾಪುರ : ಅಗ್ನಿ ಅವಘಡ, ಅಂಗಡಿಗಳು ಸಂಪೂರ್ಣ ಭಸ್ಮ

 

error: Content is protected !!
Scroll to Top