ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C

(ನ್ಯೂಸ್ ಕಡಬ) newskadaba.com ಬೆಂಗಳೂರು, . 19. ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.

 

 

ಈ ಮೂಲಕ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕೆಎಸ್‌ಆರ್‌ಟಿಸಿಯು 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿರುವ ಬಸ್‍ಪಾಸ್‍ನ್ನು ಡಿಸೆಂಬರ್ 10ರವರೆಗೂ ವಿಸ್ತರಿಸಲಾಗಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ, ರಸೀದಿ ಹಾಗೂ ಕಳೆದ ಸಾಲಿನ ಬಸ್‍ಪಾಸ್ ತೋರಿಸಿ ಸಂಬಂಧಪಟ್ಟ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗಧೂತ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

Also Read  ಕಡಬದ MSIL ಮದ್ಯದಂಗಡಿ ಫುಲ್‌ ರಶ್

 

Xl

 

error: Content is protected !!
Scroll to Top