ಸಿಎಂ ಮಾಧ್ಯಮ ಸಲೆಹಗಾರ ‘ಮಹದೇವ್ ಪ್ರಕಾಶ್ ‘ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 19: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇಂತಹ ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

 

 

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ತಮ್ಮ ರಾಜೀನಾಮೆ ಪತ್ರದಲ್ಲಿ ಕಳೆದ ಒಂದು ವರ್ಷದಿಂದ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳು. ನನ್ನ ವಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

Also Read   'ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ'      ಸಿಎಂ ಸಿದ್ದರಾಮಯ್ಯ ಘೋಷಣೆ  

 

error: Content is protected !!
Scroll to Top