(ನ್ಯೂಸ್ ಕಡಬ) newskadaba.com ಉಡುಪಿ ನ. 20: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ.
ಈ ನಿರ್ಧಾರವನ್ನು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸ್ವಾಗತಿಸಿದ್ದಾರೆ. ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪರಿಹಾರ ಮಂಜೂರಾತಿಗೆ ವಿಶೇಷ ಮುತುವರ್ಜಿ ವಹಿಸಿದ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರರ ಮುಖಂಡ ನಾಡೋಜ ಡಾ ಜಿ ಶಂಕರ್ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಸಮಸ್ತ ಮೀನುಗಾರರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.