ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು . 20: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್​ನಲ್ಲಿ ಪ್ರಕರಣ ದಾಖಲಾಗಿದೆ.


ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ‌ ಫೇಸ್​ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ ನಕಲಿ ಫೇಸ್​ಬುಕ್ ಖಾತೆಯೊಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಯಾರೂ ತಮ್ಮ ಹೆಸರಿನಲ್ಲಿ ಈಮೇಲ್, ಕರೆ, ಫ್ರೆಂಡ್ ರಿಕ್ವೆಸ್ಟ್ ಬಂದಲ್ಲಿ ಸ್ಪಂದಿಸದಂತೆ ಅವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮನವಿ ಮಾಡಿದ್ದಾರೆ.

Also Read  ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

 

 

error: Content is protected !!
Scroll to Top