ಉಡುಪಿ : ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

(ನ್ಯೂಸ್ ಕಡಬ) newskadaba.com ಉಡುಪಿ . 20: ಹಲವು ತಿಂಗಳುಗಳಿಂದ ಮಣಿಪಾಲದಲ್ಲಿ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ, ಅಪರಿಚಿತ ಮಾನಸಿಕ ಅಸ್ವಸ್ಥನನ್ನು ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದಿಂದ ರಕ್ಷಿಸಿ, ದೊಡ್ಡಣಗುಡ್ಠೆ ಡಾ.ಎ.ವಿ ಬಾಳಿಗ ಆಸ್ಪತ್ರೆಗೆ ದಾಖಲುಪಡಿಸಿ ಮಾನವಿಯತೆ ಮೆರೆದಿದ್ದರು ಇದೀಗ ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮಣಿಪಾಲ ಹೊಸಬೆಳಕು ಆಶ್ರಮದಲ್ಲಿ ನೆಲೆ ಕಲ್ಪಿಸಲಾಗಿದೆ.

ಈ ಕಾರ್ಯದಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಲ್ಯಾಣಾಧಿಕಾರಿ ಶ್ರೀಮತಿ ರತ್ನ ಯತೀಶ್, ಸಿಬ್ಬಂದಿ ಶಶಿ, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ವಿನಯಚಂದ್ರ ಸಾಸ್ತಾನ, ರೋಶನ್ ಲೂವಿಸ್, ಬಾಳಿಗ ಆಸ್ಪತ್ರೆಯ ಮೇಲ್ವಿಚಾರಕಿ ಸೌಜನ್ಯ ಶೆಟ್ಟಿ ಕೈಜೋಡಿಸಿದರು.

Also Read  ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ

 

 

error: Content is protected !!
Scroll to Top