ಸ್ಕಾಲರ್ಶಿಪ್ ಅವ್ಯವಸ್ಥೆ ವಿರುದ್ಧ “ಸ್ಕಾಲರ್ಶಿಪ್ ಕೊಡಿ” ಆಂದೋಲನ ➤ ಕ್ಯಾಂಪಸ್ ಫ್ರಂಟ್ ನಿಂದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

(ನ್ಯೂಸ್ ಕಡಬ) newskadaba.com ಮಂಗಳೂರು . 20: ಸ್ಕಾಲರ್ಶಿಪ್ ಮಂಜೂರಾತಿ ವಿಳಂಬ ಮತ್ತು ಅವ್ಯವಸ್ಥೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿ.ಹೆಚ್.ಡಿ , ಎಂ.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ಸರಕಾರದ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ “ಸ್ಕಾಲರ್ಶಿಪ್ ಕೊಡಿ” ರಾಜ್ಯವ್ಯಾಪಿ ವಿದ್ಯಾರ್ಥಿ ಆಂದೋಲನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿಯು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.

 

ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾ ಅಲ್ಪಸಂಖ್ಯಾತ ಕಚೇರಿಗೆ ಬೀಗ ಜಡಿದು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಕಾರ್ಯದರ್ಶಿ ಮುನೀರ್ ಬಜಾಲ್, ಕೋಶಾಧಿಕಾರಿ ಶರ್ಫುಧ್ಧೀನ್ ಬಜ್ಪೆ ಹಾಗು ಮಂಗಳೂರು ಏರಿಯಾ ಅಧ್ಯಕ್ಷೆ ಮೂರ್ಶಿದಾ ಉಪಸ್ಥಿತರಿದ್ದರು.

Also Read  ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ

 

 

 

Xl

error: Content is protected !!
Scroll to Top