(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿವೆ.
ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮರಾಠ ಪ್ರಾಧಿಕಾರ ರಚನೆ ಆದೇಶವನ್ನು ವಾಪಸ್ ಪಡೆಯುವಂತೆ ಈ ಹಿಂದೆ ಕನ್ನಡಪರ ಸಂಘಟನೆಗಳು ಸರ್ಕಾರಕ್ಕೆ ನ.27ರವರೆಗೆ ಗಡುವು ನೀಡಿದ್ದವು. ಈ ನಡುವೆಯೇ ಇದೀಗ ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಮತ್ತೊಮ್ಮೆ ಕರ್ನಾಟಕ ಸಂಪೂರ್ಣ ಸ್ತಬ್ಧಗೊಳ್ಳಲಿದೆ.
Also Read ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ