ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com  . 21: ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಕಳೆದ ದಿನ ರಾತ್ರಿ ಅಪಘಾತಕ್ಕೀಡಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಗಳನ್ನು ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಎಂದು ಗುರುತಿಸಲಾಗಿದೆ.







 

Xl

 

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದು, ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪ ಅಪಘಾತ ನಡೆದಿದ್ದು, ಓವರ್ ಟೆಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರುಗಳ ನಡುವೆ ಢಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ, ಇನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.






 

Xl

 

error: Content is protected !!
Scroll to Top