(ನ್ಯೂಸ್ ಕಡಬ) newskadaba.com ಉಡುಪಿ ನ. 21: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ, 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯನ್ನು ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಗುರುವಾರ ನಡೆಸಿದರು.
ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ ಸಂಬಂಧಪಟ್ಟ ಇಂಜಿನಿಯರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು. ಜಿ.ಪಂ. ಸಿಇಓ ಡಾ ನವೀನ್ ಭಟ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.