(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ.
ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು.
ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ ಪಿ ಎಸ್ ಸ್ವಾಗತಿಸಿ ನಿರೂಪಿಸಿದರು. ಸಹಾಯಕಿ ಮೀನಾಕ್ಷಿ ಸಹಕರಿಸಿದರು.