(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಕನ್ನಡ ನಾಡು ಕಂಡ ವಿಶಿಷ್ಟ ವ್ಯಕ್ತಿತ್ವಗಳಲ್ಲಿ ಕೋಟ ಶಿವರಾಮ ಕಾರಂತರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ತೊಡಗಿಕೊಳ್ಳದ ಕ್ಷೇತ್ರವಿಲ್ಲ ಎಂಬ ಮಾತು ಕಡಲ ತೀರದ ಭಾರ್ಗವನ ಅಗಾಧ ವಿದ್ವತ್ತಿಗೆ ಹಿಡಿದ ಕನ್ನಡಿ. ಹಾಗೆಯೇ ಪುತ್ತೂರು ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನವು ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದ್ದು, ಇದೀಗ ಮತ್ತೆ ಅಧಿಕೃತವಾಗಿ ಸಾರ್ವಜನಿಕ ಪ್ರವೇಶಕ್ಕೆ ಬಾಲವನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ರವರು ತಿಳಿಸಿದ್ದಾರೆ.
ಕೋವಿಡ್ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಾಲವನದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಕೋವಿಡ್ ನಿಯಂತ್ರಣದಲ್ಲಿರುವ ಹಿನ್ನಲೆಯಲ್ಲಿ ಮತ್ತೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.