ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಣಿಗಲ್, ನ. 22. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡು, ಓರ್ವ ಮೃತಪಟ್ಟ ಘಟನೆ ಕುಣಿಗಲ್ ಸಮೀಪದ ಹೊಸೂರು ಎಂಬಲ್ಲಿ ಸಂಭವಿಸಿದೆ.

ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬೆಂಗಳೂರಿಗೆ ಹೊರಟಿದ್ದ ವೇಳೆ ಹೊಸೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಸ್ಸಿನಲ್ಲಿದ್ದವರನ್ನು ಪುತ್ತೂರು, ಉಪ್ಪಿನಂಗಡಿ, ವಿಟ್ಲ ಮೂಲದ ನಿವಾಸಿಗಳೆಂದು ಹೇಳಲಾಗಿದೆ.

Also Read  ಗೃಹಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಸಚಿವೆ ಹೆಬ್ಬಾಳಕರ್ ಮಹತ್ವದ ಮಾಹಿತಿ

error: Content is protected !!
Scroll to Top