ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಮುಸುಕುಧಾರಿಗಳ ತಂಡವೊಂದು ಯುವಕರಿಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಜುಬೈರ್ ಎಂದು ಗುರುತಿಸಲಾಗಿದ್ದು, ಜತೆಗಿದ್ದ ಇಲ್ಯಾಸ್ ಎಂಬವರ ಕೈ, ಕಾಲು ಸೇರಿದಂತೆ ಹಲವೆಡೆ ಇರಿಯಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಜುಬೈರ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Scroll to Top