ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, . 23: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು.

ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

Also Read  ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

Xl

error: Content is protected !!
Scroll to Top