(ನ್ಯೂಸ್ ಕಡಬ) newskadaba.com ಮಂಗಳೂರು ನ. 23: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ರಚನೆ ಮಾಡಲು ಸರ್ಕಾರೇತರ ಪದಾಧಿಕಾರಿಗಳ ಹುದ್ದೆಗಳಿಗೆ ಜಿಲ್ಲೆಯಲ್ಲಿನ ಪ್ರಾಣಿ ಪ್ರಿಯರು, ಪ್ರಾಣಿಗಳ ರಕ್ಷಣೆಯಲ್ಲಿ ತೊಡಗಿಕೊಂಡವರು, ಗೋಶಾಲೆ ನಡೆಸುತ್ತಿರುವವರು ಮತ್ತು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಾಣಿ ಕಲ್ಯಾಣದಲ್ಲಿ ಆಸಕ್ತಿ ಉಳ್ಳವರು ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ದ.ಕ., ಮಂಗಳೂರು ಕಛೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 26 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2492337 ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
