ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಮಂಗಳೂರು . 24: ಪಿಲಿಕುಳ ನಿಸರ್ಗ ಧಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.

ಮಂಗಳೂರಿನ ಮೂಡುಶೆಡ್ಡೆ ಗ್ರಾಪಂ, ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಮೂಡುಶೆಡ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸಹಯೋಗದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಯೋಜನೆಯಡಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮದ ಹೊರಾಂಗಣ ರಸ್ತೆ ಡಾಮರೀಕರಣ ಮತ್ತು ಸುಮಾರು 69 ಲಕ್ಷ ರೂ. ವೆಚ್ಚದಲ್ಲಿ ಪಿಲಿಕುಳ ನಿಸರ್ಗಧಾಮ ಮುಂದುವರಿದ ಪಿಲಿಕುಳ ದ್ವಾರದವರೆಗೆ ನಾಲ್ಕು ಪಥದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಮುಲ್ಕಿ ಮೂಡುಬಿದಿರೆ ಶಾಸಕ ಉಮನಾಥ್ ಕೋಟ್ಯಾನ್ ಹಾಗೂ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಪಂ. ಸದಸ್ಯರು ಹಾಗೂ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ

 

error: Content is protected !!
Scroll to Top