ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ . 24: ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಪ್ರಮುಖರಾದ ಹಾಜಿ ಸೈಯದ್ ಮೀರಾ ಸಾಹೇಬ್  ಸೇರಿದಂತೆ ಆನೇಕ ಗಣ್ಯರು ಪ್ರತಿಭಟನಾಗಾರರು ಪಾಲ್ಗೊಂಡಿದ್ದಾರೆ ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

 

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕಡಬ ತಾಲೂಕು ದ.ಕ ಜಿಲ್ಲೆ ಕರ್ನಾಟಕ ರಾಜ್ಯ ,ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿರುದ್ದ ಕಡಬ ತಾಲೂಕಿನ ಭಾದಿತ ಗ್ರಾಮಗಳ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆ ಹಾಗೂ ಧರಣಿ ಮುಷ್ಕರ ನಡೆಸುತ್ತಿದ್ದಾರೆ. ಕಡಬದ ಮೇಲಿನ ಪೇಟೆಯಿಂದ ಕಾಲ್ನಡಿಗೆ ಜಾಥಾ ಮುಖಾಂತರ ಕಡಬ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮತ್ತು ಕರ್ನಾಟಕ ಸರ್ಕಾರ ಹಾಗೂ ಪ್ರಧಾನಿಗಳಿಗೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಮರ್ಷಣೆ ಮಾಡಲಿದ್ದಾರೆ. ಸಭೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದಾರೆ. ಈ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಗಾರರು ಭಾಗವಹಿಸಿದ್ದಾರೆ.

Also Read  ಡೊನಾಲ್ಡ್ ಟ್ರಂಪ್ ಆರೋಗ್ಯ ಸ್ಥಿತಿಯಲ್ಲಿ ಏರುಪೇರು.!!

 

 

error: Content is protected !!
Scroll to Top