ಮಂಗಳೂರು: ಮೊದಲ ಮಹಿಳಾ ಡಿಸಿಪಿಯಾಗಿ ► ಉಮಾ ಪ್ರಶಾಂತ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.5. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಉಮಾ ಪ್ರಶಾಂತ್ ನೇಮಕಗೊಂಡಿದ್ದು, ಇವರು ಮೊದಲ ಮಹಿಳಾ ಡಿಸಿಪಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಂಗಳೂರು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಹನುಮಂತರಾಯರಿಂದ ತೆರವಾಗಿದ್ದ ಸ್ಥಾನಕ್ಕೆ ಉಮಾ ಪ್ರಶಾಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹನುಮಂತ್ ಈಗ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದಾರೆ.

ಮೂಲತ: ಮೈಸೂರಿನವರಾದ ಉಮಾ ಅವರು ಬೆಂಗಳೂರು, ಕುಣಿಗಲ್, ಕಾರವಾರದಲ್ಲಿ ಡಿಎಸ್‌ಪಿ ಸೇರಿದಂತೆ ವಿವಿಧ ಕರ್ತವ್ಯಗಳನ್ನು ನಿರ್ವಹಿಸಿ, ಇದೀಗ ಮಂಗಳೂರು ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಉಮಾ ಪ್ರಶಾಂತ್ ನೇಮಕಗೊಂಡಿದ್ದಾರೆ.

error: Content is protected !!
Scroll to Top