ಹಿರಿಯ ಕಾಂಗ್ರೇಸ್ ನಾಯಕ ಅಹ್ಮದ್ ಪಟೇಲ್ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ . 25: ರಾಜ್ಯಸಭಾ ಸದಸ್ಯ, ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

 

 

 

ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಜೊತೆಗೆ ತಿಂಗಳ ಹಿಂದೆ ಕೋವಿಡ್ 19 ಪಾಸಿಟಿವ್ ಬಂದಾಗ ಅವರನ್ನು ಹೆಗಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗುರು ಗ್ರಾಮದ ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಿಂದ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಸೆಣಸಾಡಿದ ಅಹಮದ್ ಪಟೇಲ್ ರವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

Also Read  ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!!

 

error: Content is protected !!
Scroll to Top