ಪೆರಿಯಶಾಂತಿ: ಹೆದ್ದಾರಿ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

(ನ್ಯೂಸ್ ಕಡಬ) newskadaba.com ಪೆರಿಯಶಾಂತಿ . 25: ಸುಬ್ರಹ್ಮಣ್ಯ-ಮರ್ದಾಳ-ಪೆರಿಯಶಾಂತಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಸಮೀಪ ಪೆರಿಯಶಾಂತಿ ರಾಜ್ಯಹೆದ್ದಾರಿಯ ಬದಿ ತ್ಯಾಜ್ಯ ತಂದು ಎಸೆಯುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಲಾಗಿದೆ.

 

 

ಶುಭ ಸಮಾರಂಭವೊಂದರಲ್ಲಿ ಬಳಸಲಾಗಿದ್ದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದರು. ಸ್ಥಳಕ್ಕೆ ಆಗಮಿಸಿದ ನೀತಿ ತಂಡದ ರಾಜ್ಯಧ್ಯಕ್ಷ ಜಯಂತ್ ಟಿ. ಹಾಗೂ ಇತರರು ತ್ಯಾಜ್ಯ ಸುರಿಯುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡು ಬಳಿಕ ಕೌಕ್ರಾಡಿ ಗ್ರಾ.ಪಂ. ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪಂಚಾಯತ್ ಅಧಿಕಾರಿಗಳು ತ್ಯಾಜ್ಯ ಎಸೆದ ವ್ಯಕ್ತಿಯ ಸಹಿತ ವಾಹನವನ್ನು ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ. ಪಂಚಾಯತ್ ನಿರ್ಣಯದಂತೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ಮಂಗಳೂರಿನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

 

Xl

error: Content is protected !!
Scroll to Top