ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು . 25:  ನಗರದ ಕದ್ರಿ ಪಾರ್ಕ್‌ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗುತ್ತಿದ್ದ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ ರದ್ದುಗೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಕೊರೊನಾ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೆ ಸರ್ಕಾರದ ಅನುಮತಿ, ಅನುದಾನ ಸಿಗುವುದು ಕಷ್ಟ. ಸದ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇತ್ತ ಫಲಪುಷ್ಪ ಪ್ರದರ್ಶನ ನಡೆಸಲು ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಕೆಲಸಗಳು ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ. ಹೀಗಾಗಿ ಫಲಪುಷ್ಪ ಪ್ರದರ್ಶನ ನಡೆಸುವುದು ಡೌಟ್ ಎಂದು ಹೇಳಿದ್ದಾರೆ.

Also Read  ನೆಲ್ಯಾಡಿ: ಬುಲೆಟ್ ಟ್ಯಾಂಕರ್ ನ ಹಿಂಭಾಗ ಕಾರಿಗೆ ಢಿಕ್ಕಿ ➤ ತೋಡಿಗೆ ಉರುಳಿಬಿದ್ದ ಕಾರು..

 

error: Content is protected !!
Scroll to Top