ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು . 25: ಇಲ್ಲಿನ ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

 

 

ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಸಮ್ಮಿಶ್ರ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ?? ➤ ಡಾ.ಸುಧಾಕರ್

 

Xl

error: Content is protected !!
Scroll to Top