ಕರಾವಳಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 2.900 ಕೋಟಿ ರೂ ➤ ಸಚಿವ ಜೆ.ಸಿ. ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು . 25: ಪಶ್ಚಿಮವಾಹಿನಿ ಯೋಜನೆಯಲ್ಲಿ ಕರಾವಳಿಯ ಮೂರು ಜಿಲ್ಲೆಯಲ್ಲಿ ಸುಮಾರು 2.900 ಕೋಟಿ ರೂ. ವೆಚ್ಚದಲ್ಲಿ ತಲಾ 400 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ಉಪ್ಪು ನೀರಿನಿಂದ ಕಂಗೆಟ್ಟ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಂತರ್ಜಲ ವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಚಿಂತನೆ ನಡೆಸಿದ್ದು, ಸುಮಾರು 2900 ಕೋಟಿ ರೂ. ವೆಚ್ಚದಲ್ಲಿ 400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದಿದ್ದಾರೆ ಎತ್ತಿನಹೊಳೆ ಯೋಜನೆಯಿಂದ ಕೇವಲ 24 ಟಿಎಂಸಿ ನೀರಿಗೆ ಬರೋಬ್ಬರಿ 24 ಸಾವಿರ ಕೋಟಿ ವಿನಿಯೋಗಿಸುವುದಕ್ಕಿಂತ, ನದಿಗಳಿಗೆ ಚಿಕ್ಕ ಚಿಕ್ಕ ವೆಂಟೆಡ್‌ ಡ್ಯಾಂ ನಿರ್ಮಾಣ ಮಾಡಿದಾಗ ಕುಡಿಯುವ ನೀರಿಗೆ ಹಾಗೂ ಕೃಷಿಕರಿಗೆ ಅನುಕೂಲವಾಗಲಿದೆ ಎಂದರು.

Also Read  ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

error: Content is protected !!
Scroll to Top