(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಭೇಟಿಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ದೂರು ಸ್ವೀಕರಿಸುವ ತಾಲೂಕು ಕೆಂದ್ರಗಳು: ನವೆಂಬರ್ 26 ರಂದು ಬೆಳಿಗ್ಗೆ 11ಕ್ಕೆ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ, ಹಾಗೂ ಮಧ್ಯಾಹ್ನ 2.30 ಕ್ಕೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ, ನವೆಂಬರ್ 27 ಬೆಳಿಗ್ಗೆ 11 ಘಂಟೆಗೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 2.30ರಿಂದ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಹಾಗೂ ನವೆಂಬರ್ 30ರಂದು ಮೂಡಬಿದ್ರೆ ನಿರೀಕ್ಷಣಾ ಮಂದಿರದಲ್ಲಿ ದೂರುಗಳನ್ನು ಸ್ವೀಕರಿಸಲಾಗುವುದು ಎಂದು ಮಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










