(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 26: ಕಡೇ ಶಿವಾಲಯ ಗ್ರಾಮದ ಬುಡೋಳಿ ಎಂಬಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಬಂಟ್ವಾಳ ಅರಣ್ಯ ಇಲಾಖೆ ಸಿಬ್ಬಂದಿಗಳು ಪುತ್ತೂರು ವಲಯ ಅರಣ್ಯಾಧಿಕಾರಿಗಳ ಸಹಕಾರದೊಂದಿಗೆ ಪತ್ತೆ ಹಚ್ಚಿ ಲಾರಿ ಸಮೇತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ವಲಯ ಅರಣ್ಯಾಧಿಕಾರಿಗಳಾದ ರಾಜೇಶ್ ಬಳೆಗಾರ, ಉಪವಲಯ ಅರಣ್ಯಾಧಿಕಾರಿಗಳಾದ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರುಗಳಾದ ಲಕ್ಷ್ಮೀ ನಾರಾಯಣ. ಜಿತೇಶ್, ಸಿಬ್ಬಂದಿಗಳಾದ ಪ್ರವೀಣ್ ಕಲ್ಮಲೆ, ಭಾಸ್ಕರ, ಡಿ. ಜಯರಾಂ ಪಾಲ್ಗೊಂಡಿದ್ದರು. ಇನ್ನು ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಸುಮಾರು 5 ಲಕ್ಷ ಎಂದು ಅಂದಾಜಿಸಲಾಗಿದೆ.