ಉಲ್ಲಾಳ ಬೀಚ್‍ನಲ್ಲಿ ಯೋಗ ಮತ್ತು ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಉಲ್ಲಾಳ . 26: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರರಕ್ಷಣಾ ಪಡೆಯ ಸಂಯುಕ್ತ ಆಶ್ರಯದಲ್ಲಿ ನ. 22 ರಂದು ಉಲ್ಲಾಳ ಬೀಚ್‍ನ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಪ್ರಾಣಾಯಾಮ, ಯೋಗ ಶಿಬಿರ ಕಾರ್ಯಕ್ರಮವು ನಡೆಯಿತು.

ನ.22 ರ ಭಾನುವಾರದಂದು ಉಳ್ಳಾಲ ಕಡಲತೀರದಲ್ಲಿ ಬೆಳಗ್ಗೆ 7.00 ರಿಂದ 8.30 ರವರೆಗೆ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರ ನೇತೃತ್ವದಲ್ಲಿ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ನಡೆಯಿತು. ಹಾಗೂ ಬೆಳಗ್ಗೆ 9.00 ರಿಂದ 10.00 ರವರೆಗೆ ಸ್ವಚ್ಛತಾ ಅಭಿಯಾನವು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್‍ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ಸುಮಾರು 35 ಮಂದಿ ಈ ಶಿಬಿರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗೃಹರಕ್ಷಕರಾದ ಸುನಿಲ್ ಕುಮಾರ್, ದಿವಾಕರ್, ಸುನಿಲ್, ದುಶ್ಯಂತ್ ರೈ ಹಾಗೂ ಪೌರರಕ್ಷಣಾ ತಂಡದ ನಿತಿನ್, ಸಂತೋಷ್, ಅಂಜನ್ ಮತ್ತು ಪೌರರಕ್ಷಣಾ ಕಾರ್ಯಕರ್ತರು ಉಪಸ್ಥಿತರಿದ್ದರು.

Also Read  ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                               

 

error: Content is protected !!
Scroll to Top