ಮಹಿಳೆಯರು ಶಿಕ್ಷಣ ಸ್ವ-ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕು-ಶಿಲ್ಪ ಎ.ಜಿ

(ನ್ಯೂಸ್ ಕಡಬ) newskadaba.com ಮಂಗಳೂರು . 26: ಮಹಿಳೆಯರು ಶಿಕ್ಷಣವಂತರಾಗಿ ಸ್ವ -ಉದ್ಯೋಗ ಕೈಗೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ ತಿಳಿಸಿದರು.

ಅವರು ಉಳ್ಳಾಲದ ಬಿ.ಎಂ. ಶಾಲೆ ಸಂಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಕೀಲರ ಸಂಘ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಿಳಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಮಹಿಳೆಯರಿಗಾಗಿ ಅನೇಕ ಕಾನೂನು ಹಾಗೂ ಹಕ್ಕುಗಳನ್ನು ಜಾರಿಗೆ ತಂದಿರುವುದರ ಜೊತೆಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.

Also Read  ಕೇಂದ್ರ ಸಚಿವರ ಪ್ರವಾಸ


ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಸಹ ದೌರ್ಜನ್ಯಗಳು ನಿಂತಿಲ್ಲ ಎಂದ ಅವರು ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸರ್ಕಾರದಿಂದ ಕಾನೂನಿನ ಅಡಿಯಲ್ಲಿ ಸಿಗಬಹುದಾದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜನರಿಗೆ ಕಾನೂನಾತ್ಮಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಲಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.
ವಕೀಲರ ಸಂಘದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಹೆಚ್.ವಿ. ಮಾತನಾಡಿ, ವಿಧವೆಯರಿಗೆ ಹಾಗೂ ವಯಸ್ಕರಿಗೆ ಸಾಮಾಜಿಕ ಭದ್ರತೆಯನ್ನು ಕಲ್ಪಿಸುವ ಯೋಜನೆಯನ್ನು ರೂಪಿಸಿದೆ. ಇದನ್ನು ಪ್ರತಿಯೊಬ್ಬ ಅರ್ಹಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.ಮುಖ್ಯ ಅತಿಥಿಗಳಾಗಿ ಉಳ್ಳಾಲ ನಗರ ಸಭೆಯ ಸದಸ್ಯೆ ಮಮತಾ ರಾಘವ್, ಶೆಹನಾಜ್ ಅಕ್ರಂ, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ, ಬಿ.ಎಂ ಶಾಲೆಯ ಮುಖ್ಯ ಶಿಕ್ಷಕಿ ಜಯವಂತಿ ಸೋನ್ಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!
Scroll to Top