ಮೈಸೂರು ವಿವಿಯಲ್ಲಿ ಖ್ಯಾತ ಹಿನ್ನಲೆ ಗಾಯಕ ಎಸ್ಪಿಬಿ ಹೆಸರಿನಲ್ಲಿ ಸಂಗೀತ ಪೀಠ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮೈಸೂರು . 26: ವಿಶ್ವವಿದ್ಯಾನಿಲಯದ ಲಲಿತಕಲಾ ಕಾಲೇಜಿನಲ್ಲಿ ದಿವಂಗತ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ.

 

 

ಈ ಹಿನ್ನಲೆಯಲ್ಲಿ ಸಂಗೀತ ಪೀಠ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಸಿಂಡಿಕೇಟ್ ಅನುಮೋದನೆ ನೀಡಿದ್ದು, ಅವರ ಹೆಸರಿನ ಸಂಗೀತ ಪೀಠ ಪ್ರಾರಂಭವಾಗಲಿದ್ದು ಇದಕ್ಕಾಗಿ ವಾರ್ಷಿಕ ಐದು ಲಕ್ಷ ಮೀಸಲು ಇರಿಸಲಾಗುತ್ತದೆ. ಈ ಹಣದಲ್ಲಿ ವಿಶೇಷ ಉಪನ್ಯಾಸ, ಕಾರ್ಯಾಗಾರ, ಪ್ರಾತ್ಯಕ್ಷಿಕೆ, ಗ್ರಂಥ ಪ್ರಕಟಣೆ ಸೇರಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ವಿವಿ ಪ್ರಕಟಣೆ ಹೇಳಿದೆ.

Also Read   ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ

 

Xl

error: Content is protected !!
Scroll to Top