ಮಂಗಳೂರು: ಅಹ್ಮದ್ ಪಟೇಲ್ ನಿಧನ ➤ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಅರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು . 26: ಕಳೆದ ದಿನ ನಿಧನರಾದ ನಿಧನರಾದ ರಾಜ್ಯಸಭೆ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

 

ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು ಅಹ್ಮದ್ ಪಟೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ನುಡಿ ನಮನ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ, “ಗಾಂಧಿ ಕುಟುಂಬದ ಆಪ್ತರಾಗಿದ್ದ ಅಹ್ಮದ್ ಪಟೇಲ್, ತಾಪಂ ಚುನಾವಣೆ ಮೂಲಕ ರಾಜಕೀಯಕ್ಕೆ ಪ್ರವೇಶ ಪಡೆದಿದ್ದರು. ನಂತರದ ದಿನಗಳಲ್ಲಿ ಉನ್ನತ ಮಟ್ಟದ ನಾಯಕರಾಗಿ ಬೆಳೆದರು. ಅಹ್ಮದ್ ಪಟೇಲರು ಕಾಂಗ್ರೆಸ್ ಅನ್ನೋ ಕಟ್ಟಡದ ಒಂದು ಪಿಲ್ಲರ್ ನಂತಿದ್ದರು. ಅವರ ಅಗಲುವಿಕೆ ಪಕ್ಷದ ಓರ್ವ ನಾಯಕನನ್ನಾಗಿ ಮಾತ್ರವಲ್ಲದೆ, ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಂತಾಗಿದೆ” ಎಂದರು. ಈ ಸಂದರ್ಭ ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ಶಾಂತಲಾ ಗಟ್ಟಿ ಪತಿ ಯೋಗೀಶ್ ಗಟ್ಟಿ ಹಾಗೂ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ನಿಧನಕ್ಕೂ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

Also Read  ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

 

 

error: Content is protected !!
Scroll to Top