ಪಂಜದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಪಂಜ . 27: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಜತಿನ್ ಕುಮಾರ್(30)(ದೀಕ್ಷಿತ್) ಎಂದು ಗುರುತಿಸಲಾಗಿದೆ.

 

ಬೆಂಗಳೂರಿನಲ್ಲಿ ಹುಂಡೈ ಕಂಪೆನಿಯ ಉದ್ಯೋಗಿಯಾಗಿರುವ ಇವರು ಕಳೆದ ದಿನ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ವಿಷಯ ತಿಳಿದ ಸಂಬಂಧಿಕರು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಸಹೋದರ ಶಿವಕುಮಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.

 

Xl

Scroll to Top