ಕಾಸರಗೋಡು: ಬೈಕ್ ಮತ್ತು ಆಟೋರಿಕ್ಷಾ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು . 27: ಕಳೆದ ದಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಜಾರ್ ಬಳಿ  ಬೈಕ್ ಹಾಗೂ ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಾಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಚೆರ್ಕಳ ಮಾಸ್ತಿಕುಂಡು ಪೊವ್ವಲ್ ನಿವಾಸಿ ಮಸೂದ್(25) ಎಂದು ಗುರುತಿಸಲಾಗಿದೆ.

 

 

 

ಮೃತಪಟ್ಟ ವ್ಯಕ್ತಿಯನ್ನು ಗುರುತು ಚೀಟಿ ಹಾಗೂ ಬೈಕ್ ನಂಬರ್ ಸಹಾಯದಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿದೆ. ಗಂಭೀರ ಗಾಯಗೊಂಡಿದ್ದ ಸಂದೀಪ್ ಉನ್ನಿ(24) ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

 

Scroll to Top