(ನ್ಯೂಸ್ ಕಡಬ) newskadaba.com ಮಂಗಳೂರು ನ. 27: ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರರ ಹೆಸರಿಡುವಂತೆ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಒತ್ತಾಯ ಮಾಡಿದ್ದಾರೆ.
ಮಂಗಳೂರು ಸಮೀಪದಲ್ಲಿ ಉಡುಪಿ ಹಾಗೂ ಶೃಂಗೇರಿ ಕ್ಷೇತ್ರ ಇದೆ. ಜಗದ್ಗುರು ಶಂಕರಾಚಾರ್ಯರು ಶೃಂಗೇರಿ ಮಠ ಸ್ಥಾಪಿಸಿದ್ದಾರೆ. ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀ ಕೃಷ್ಣ ಮಠ ಸ್ಥಾಪಿಸಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವ ಶಂಕರ ವಿಮಾನ ನಿಲ್ದಾಣ ಹೆಸರಿಡುವುದು ಅರ್ಥಪೂರ್ಣ ಎಂದು ಶ್ರೀಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನ ನಿಲ್ದಾಣ ಮೂಡಿಬಂದಂತೆ,ದಕ್ಷಿಣ ಭಾರತದ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರರ ನಾಮಕರಣ ಭಾರತದ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತಾಗುವುದು ಎಂದು ಶ್ರೀಗಳು ಹೇಳಿದ್ದಾರೆ.ಮತ್ತೊಂದೆಡೆ ಈಗಾಗಲೇ ಮಂಗಳೂರು ವಿಮಾಣ ನಿಲ್ಧಾಣಕ್ಕೆ ತುಳುನಾಡಿನ ಪ್ರಸಿದ್ಧ ಧೀರಾರದ, ಅವಳಿ ಸಹೋದರಾರದ “ಕೋಟಿ ಚೆನ್ನಯ”ರ ಹೆಸರಿಡುವಂತೆ ಯುವ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಯುತ್ತಿದೆ.