ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯನಗರ . 27: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.

 

 

 

ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು. ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು. ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ.ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.

 

 

error: Content is protected !!

Join WhatsApp Group

WhatsApp Share