‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು . 27: ನಗರದ ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರವಾದ ಗೋಡೆ ಬರಹಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

 

 

ಈಗಾಗಲೇ ಘಟನೆ ಸಂಬಂಧ ಶಾಸಕರು, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿ. ಇಂತಹ ರಾಷ್ಟ್ರ ವಿರೋಧಿ ಕೃತ್ಯ ಸಹಿಸಲಾಗದು. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನೆ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದಿದ್ದಾರೆ.

Also Read  ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..!

 

error: Content is protected !!
Scroll to Top