‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು . 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಉಗ್ರರ ಪರವಾದ ಬರಹ ಇದೇ ಮೊದಲ ಬಾರಿಗೆ ಕಂಡುಬಂದಿದೆ. ಈ ಹಿಂದೆ ನಕ್ಸಲ್ ಪರ ಬರಹಗಳು ಪತ್ತೆಯಾಗಿದ್ದವು. ಆದರೆ, ಯಾರು ಬರೆದವರು ಎಂಬುದು ಪತ್ತೆಯಾಗಿರಲಿಲ್ಲ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

Also Read  ಕಡಬದಲ್ಲಿ ಕಾಡಾನೆ ಸ್ಥಳಾಂತರ ಮಾಡುವ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ ಪ್ರಕರಣ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದ ನ್ಯಾಯಾಲಯ

error: Content is protected !!
Scroll to Top