ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು . 28: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸದಾಶಿವ ನಗರದ ಮನೆ ಯಲ್ಲಿ ನಡೆದಿದೆ .

 

ಕಳೆದ ದಿನ  ಸಂಜೆ 7.30 ರ ವೇಳೆಗೆ 10 ಕ್ಕೂ ಹೆಚ್ಚು ನಿದ್ರೆ ಮಾತೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ , ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಸಂತೋಷ್ ರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅವರು, ಕಳೆದ ದಿನ ತಮ್ಮ ಜೊತೆಯಲ್ಲಿಯೇ ಓಡಾಡಿಕೊಂಡಿದ್ದ , ಬೆಳಗ್ಗೆ ಜೊತೆಯಲ್ಲಿಯೇ ವಾಕ್ ಕೂಡ ಮಾಡಿದ್ದೇವೆ.ಏಕಾಏಕಿ ಏನಾಯ್ತು.ಯಾಕಿಂಗೆ ಮಾಡಿಕೊಂಡ ಎಂಬುದು ತಿಳಿದಿಲ್ಲ . ವೈದ್ಯರು ಆರೋಗ್ಯ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ.ಸಂತೋಷ್ ಕುಟುಂಬ ಸದಸ್ಯರನ್ನು ಹಾಗೂ ವೈದ್ಯರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅವರು ತಿಳಿಸಿದ್ದಾರೆ .

Also Read  ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ

 

 

error: Content is protected !!
Scroll to Top