ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳಿಂದ ದಾಳಿ ➤ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ . 28: ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಸೂಚನೆ ಮೇರೆಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿ ಕೆಂಪುಗುಡ್ಡ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯೊಂದು ಪರವಾನಗಿ ರಹಿತವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದ ತಂಡವು ಕಳೆದ ದಿನ ದಾಳಿ ನಡೆಸಿದೆ.

 

 

ಸ್ಥಳದಲ್ಲಿ ಕಲ್ಲು ತೆಗೆಯಲು ಉಪಯೋಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಬಾರಿ ಗಾತ್ರದ 2 ಕಟ್ಟಿಂಗ್ ಯಂತ್ರ 1 ಟಿಲ್ಲರ್ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮ ಲೆಕ್ಕಾಧಿಕಾರಿ ಅಮೃತಾಂಶು, ಪಿಡಿ.ಒ. ರವಿ, ಕಾರ್ಯದರ್ಶಿ ಲಕ್ಷ್ಮೀ ನಾರಾಯಣ, ಚೇತನ್, ತಾಲೂಕು ಕಚೇರಿ ಸಿಬ್ಬಂದಿ ಲೋಕನಾಥ್, ಸಂದೀಪ್ ಕುರಿಯಾಳ ಮೊದಲಾದವರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Also Read  ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

 

error: Content is protected !!
Scroll to Top