ಮಂಗಳೂರು: ಗ್ರಾಪಂ ಚುನಾವಣೆ ಗೆಲುವಿಗೆ ಡಿಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು . 28: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಬೇಕು ಎಂದು ಪ್ರಾರ್ಥಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ವಿಶೇಷ ಪೂಜೆ ಸಲ್ಲಿಸಿದರು.ಎರಡು ದಿನಗಳ ಕರಾವಳಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ಕದ್ರಿ ದೇವಸ್ಥಾನಕ್ಕೆ ಬಂದ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವತ್ಥ ನಾರಾಯಣ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ದೀಪಾರಾಧನೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಪಕ್ಷ ಗೆಲುವು ಸಾಧಿಸುವಂತೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ಕೊರೊನಾ ವೈರಸ್ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡ ಹೆಜ್ಜೆಯಿಂದ ನಿಯಂತ್ರಣ ಸಾಧ್ಯವಾಗಿದೆ ಮತ್ತು ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ತೆಗೆದುಕೊಂಡ ಕ್ರಮದ ಬಗ್ಗೆ ಶ್ಲಾಘಿಸಿದರು.

Also Read  ಉಳ್ಳಾಲ: ಮಾ. 25ರಂದು ಹೊನಲು‌ ಬೆಳಕಿನ ನರಿಂಗಾನ‌ ಕಂಬಳ

Xl

error: Content is protected !!
Scroll to Top