ಉಡುಪಿ: ಕೃಷ್ಣ ಮಠ, ಕಮಲಶಿಲೆ, ಕೊಲ್ಲೂರು ದೇಗುಲಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ . 29: ಉಡುಪಿ ಪ್ರವಾಸ ಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿದರು. ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ಅವರು,ರಾತ್ರಿಯ ಮಹಾಪೂಜೆಯಲ್ಲಿ ಪಾಲ್ಗೊಂಡರು.

ಬಳಿಕ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದ ಡಿಕೆಶಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು. ಇಂದು ಕೊಲ್ಲೂರಿನಲ್ಲಿ ಪೂಜೆಯ ಬಳಿಕ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜನೆಗೊಂಡಿದೆ. ಉಡುಪಿಯಲ್ಲಿ ಶ್ರೀ ಕೃಷ್ಣಮಠ ಭೇಟಿಯ ಕಾರ್ಯಕ್ರಮವೂ ನಿಗದಿಯಾಗಿದೆ.

Also Read  ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

Xl

 

 

error: Content is protected !!
Scroll to Top