ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲೇರಿ . 30: ಉಪ್ಪಿನಂಗಡಿ ಸಮೀಪದ ಕಲ್ಲೇರಿ ಹುಣ್ಸೆಕಟ್ಟೆ ಎಂಬಲ್ಲಿ ಬೈಕೊಂದು ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

 

 

ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪ್ರಸಾದ್ ರೈ (36) ಮತ್ತು ಜಯರಾಮ ಗೌಡ(29) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಕಡೆಯಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಪಿಕಪ್ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯಚರಣೆ ನಡೆಸಿ ತಣ್ಣೀರುಪಂತದಲ್ಲಿ ಪಿಕಪ್ ಹಾಗೂ ಚಾಲಕ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ನಿವಾಸಿ ಹರೀಶ್ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Also Read  ಹಾಲಿಗೂ ತಟ್ಟಿದ ಕೊರೋನಾ ಬಿಸಿ ➤ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಾಲು ಡಿಪೋ ಬಂದ್

 

error: Content is protected !!
Scroll to Top